ಬಳ್ಳಾರಿ: ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭತ್ತ, ಮುಸುಕಿನ ಜೋಳ ಹಾಗೂ ನೀರಾವರಿ ಹಾಗೂ ಮಳೆಯಾಶ್ರಿತ ಬೆಳೆಗಳಾದ ಜೋಳ, ರಾಗಿ ಸಜ್ಜೆ, ನವಣೆ, ತೊಗರಿ, ಹೆಸರು, ಉರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಟೊಮ್ಯಾಟೊ, ಈರುಳ್ಳಿ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆ ಮಾಡಿಸಲಾಗುತ್ತದೆ.
ನೀರಾವರಿ ಹಾಗೂ ಮಳೆಯಾಶ್ರಿತ ಬೆಳೆಗಳಾದ ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಟೊಮ್ಯಾಟೊ, ಈರುಳ್ಳಿ ಬೆಳೆಗಳಿಗೆ ಜುಲೈ 31 ರಂದು ಕೊನೆಯ ದಿನ, ಹೆಸರು, ಎಳ್ಳು, ಬೆಳೆಗಳಿಗೆ ಜುಲೈ 15 ರಂದು ಕೊನೆಯ ದಿನ ಹಾಗೂ ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ಆಗಸ್ಟ್ 14 ನೊಂದಾಯಿಸಿಕೊಳ್ಳಲು ಕೊನೆಯ ದಿನವಾಗಿರುತ್ತದೆ.
ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ದೂ.ಸಂ.08392-276224 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೆಶಕರು ತಿಳಿಸಿದ್ದಾರೆ. ವೆಬ್ ಸೈಟ್‍ನಲ್ಲಿಯೂ (http://samrkshane.karnataka.gov.in) ಸಹ ಮಾಹಿತಿ ಪಡೆಯಬಹುದಾಗಿದೆ