
ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಕಲಬುರ್ಗಿಯ ಕೃಷಿ ಮಹಾವಿದ್ಯಾಲಯದಲ್ಲಿ ಬೆಳೆ ಸಮೀಕ್ಷೆ ಪ್ರಗತಿ ಹಾಗೂ ಕೃಷಿ ಇಲಾಖೆ ವಿಭಾಗ ಮಟ್ಟದ ಸಭೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವೇಳೆಗಾಗಲೇ ಬೆಳೆವಿಮೆ ಮಂಜೂರಾಗಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಆಗಬೇಕಿತ್ತು ಎಂದು ಹೇಳಿದ್ದಾರೆ.
ಬೆಳೆ ಹಾನಿ ಪ್ರಮಾಣ ವರದಿ ರೂಪಿಸುವಲ್ಲಿ ಲೋಪ ಸರಿಪಡಿಸಲು ಕೆಲ ತಿಂಗಳು ಆದ ಕಾರಣ ವಿಳಂಬವಾಗಿದೆ. ಈಗ ಎಲ್ಲಾ ಕಾರ್ಯಗಳು ಮುಗಿದಿದ್ದು, ವಾರ ಇಲ್ಲವೇ 15 ದಿನಗಳ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಮಾಡಲಾಗುವುದು ಎಂದು ತಿಳಿಸಿದ್ದಾರೆ.