ಧಾರವಾಡ ಜಿಲ್ಲೆಯಲ್ಲಿ 2020ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಉಂಟಾದ ನಷ್ಟಕ್ಕೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಬೆಳೆ ಮುಳುಗಡೆ, ಗುಡುಗು ಮಿಂಚುಗಳಿಂದ ಆದ ಬೆಂಕಿ ಅವಘಡ, ಆಲಿಕಲ್ಲು ಮಳೆ ಮೊದಲಾದವುಗಳಿಂದ ಉಂಟಾಗುವ ನಷ್ಟವನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆವಿಮಾ ನಷ್ಟಪರಿಹಾರ ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ.
ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಂಡ ರೈತರು ಪ್ರಯೋಜನ ಪಡೆಯಬಹುದಾಗಿದೆ. ಬೆಳೆನಷ್ಟ ಉಂಟಾದಲ್ಲಿ ಬೆಳೆವಿಮೆ ನೋಂದಣಿ ಮಾಡಿರುವ ರೈತರು ನೇರವಾಗಿ ಭಾರತಿ ಅಕ್ಸಾ ಜನರಲ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳನ್ನು ಅಥವಾ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.