ಬೆಂಗಳೂರು: ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ 33 ಗಂಟೆಗಳ ಕಾಲ ಸಂಪೂರ್ಣ ಬಂದ್ ಮಾಡಲಾಗುವುದು. ರಾಜ್ಯದ್ಯಂತ 144 ಸೆಕ್ಷನ್ ಜಾರಿ ಮಾಡಿ ಭಾನುವಾರ ಲಾಕ್ ಡೌನ್ ಜಾರಿಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯಾದ್ಯಂತ ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಇದರೊಂದಿಗೆ ಸಂಡೆ ಲಾಕ್ಡೌನ್ ಇರುವುದರಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್ ಮಾಡಲಾಗುವುದು. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿದೆ.
ಹಣ್ಣು, ತರಕಾರಿ, ದಿನಸಿ, ಹಾಲು, ಮಾಂಸ, ಔಷಧ ಮೊದಲಾದ ಅಗತ್ಯ ವಸ್ತು ಮತ್ತು ಸೇವೆ ಹೊರತಾಗಿ ಆಟೋ, ಕ್ಯಾಬ್, ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಇರುವುದಿಲ್ಲ. ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಇರುತ್ತದೆ. ಅನಗತ್ಯವಾಗಿ ತಿರುಗಾಡುವಂತಿಲ್ಲ. ಲಾಕ್ಡೌನ್ ನಿಂದಾಗಿ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರುವುದರಿಂದ ಅನಗತ್ಯವಾಗಿ ಓಡಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.