ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರಾಗಿಣಿ ಅನಾರೋಗ್ಯದ ನೆಪದಲ್ಲಿ ವಿಚಾರಣೆ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.
ರಾಗಿಣಿಗೆ ಬೆನ್ನು ನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆಯನ್ನು ಮುಂದೂಡಿದ್ದಾರೆ. ನಿನ್ನೆ ರಾಗಿಣಿ ವಿಚಾರಣೆ ನಡೆಸಿದ ಅಧಿಕಾರಿಗಳು ಇವತ್ತು ಕೂಡ ವಿಚಾರಣೆ ಮುಂದುವರಿಸಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ. ಈ ನಡುವೆ ರಾಗಿಣಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಾಳೆ ರಜಾದಿನವಾಗಿರುವುದರಿಂದ ರಾಗಿಣಿ ಸಿಸಿಬಿ ಕಸ್ಟಡಿಯಲ್ಲೇ ಇರಲಿದ್ದಾರೆ.