alex Certify ಅಂಫಾನ್ ಚಂಡಮಾರುತ ಅಬ್ಬರ: 2 ದಿನ ಗುಡುಗು – ಸಿಡಿಲು ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಫಾನ್ ಚಂಡಮಾರುತ ಅಬ್ಬರ: 2 ದಿನ ಗುಡುಗು – ಸಿಡಿಲು ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಅಂಫಾನ್ ಚಂಡಮಾರುತ ಪ್ರಭಾವದಿಂದಾಗಿ ಮೇ 19 ಮತ್ತು 20 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ಮತ್ತು ಬುಧವಾರ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು-ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಪೂರ್ವ ಕರಾವಳಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತದ ಪ್ರಭಾವದಿಂದಾಗಿ ಈ ಬೆಳವಣಿಗೆ ಉಂಟಾಗಿದೆ. ಇದರಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...