ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಇಂಥ ನೀಚ ರಾಜಕಾರಣ ನಾನು ನೋಡಿಲ್ಲ. ನಮ್ಮ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ. ನಮ್ಮ ಅಭ್ಯರ್ಥಿಯ ಮೇಲೆ ಕೇಸ್ ಹಾಕಿದ್ದಾರೆ ಎಂದು ದೂರಿದ್ದಾರೆ.
ಬಿಬಿಎಂಪಿ, ಪೊಲೀಸ್ ಅಧಿಕಾರಿಗಳ ಬಳಸಿಕೊಂಡು ನಮ್ಮ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ. ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಬಿಜೆಪಿ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ನಮ್ಮ ಅಭ್ಯರ್ಥಿ ನೀತಿಸಂಹಿತೆ ಉಲ್ಲಂಘನೆ ಮಾಡದಿದ್ದರೂ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಇಂತಹ ನೀಚ ರಾಜಕಾರಣವನ್ನು ನೋಡಿರಲಿಲ್ಲ. ನೀತಿ ಸಂಹಿತೆ ಉಲ್ಲಂಘನೆಯಾಗದಿದ್ದರೂ ಕುಸುಮಾ ಅವರ ವಿರುದ್ಧ ಕೇಸು ದಾಖಲಿಸಿದ್ದು ಇದಕ್ಕೆ ಸಿಎಂ ಅವರೇ ಉತ್ತರಿಸಬೇಕು ಎಂದು ಹೇಳಿದ್ದಾರೆ.