ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು.
ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ ನಡೆಯಲಿದ್ದು, ರಾಜ್ಯದ ಪ್ರತಿ ಬ್ಲಾಕ್ ಕಾಂಗ್ರೆಸ್ ನ ಕನಿಷ್ಠ ಮೂರು ಗ್ರಾಮಪಂಚಾಯಿತಿಗಳಲ್ಲಿ ನಡೆಯಲಿದೆ.
ಪ್ರತಿ ಗ್ರಾಮ ಪಂಚಾಯಿತಿಯಿಂದ ಯುವ ಕಾಂಗ್ರೆಸ್, ಎನ್.ಎಸ್.ಯು.ಐ., ಸೇವಾದಳ, ಮಹಿಳಾ ಕಾಂಗ್ರೆಸ್, ಡಿಜಿಟಲ್ ವಿಭಾಗದವರು ಭಾಗಿಯಾಗಲಿದ್ದಾರೆ. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಕುರಿತು ಮಾಹಿತಿ ನೀಡುವ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯದ ಬಗ್ಗೆ ಚರ್ಚೆ ನಡೆಯಲಿದೆ.