ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸೇರಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರ, ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ನಿವಾಸ ಸೇರಿದಂತೆ ಡಿ.ಕೆ. ಶಿವಕುಮಾರ್ ಗೆ ಸಂಬಂಧಿಸಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ.
ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೇ, ಬೆಂಗಳೂರು ವಿಭಾಗ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಗೌಪ್ಯತೆ ಕಾಪಾಡಿಕೊಂಡು ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಕ್ಕಾ ಪ್ಲಾನ್ ಮಾಡಿ ದಾಳಿ ಮಾಡಿ ಮಾಹಿತಿ ಕಲೆಹಾಕಿದೆ ಎನ್ನಲಾಗಿದ್ದು, ಸಿಬಿಐ ಎಸ್ಪಿ ಥಾಮ್ಸನ್ ಜೋಸ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.