ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಕಾವೇರಿ ಅಪಾರ್ಟ್ ಮೆಂಟ್ ನಲ್ಲಿರುವ ಡಿ.ಕೆ. ಸುರೇಶ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿ.ಕೆ. ಸಹೋದರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ 60 ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗಿದೆ.
ದೆಹಲಿಯ ಕಾವೇರಿ ಅಪಾರ್ಟ್ ಮೆಂಟ್, ಸಫ್ದರ್ ಜಂಗ್ ನಿವಾಸದ ಮೇಲೆ ದಾಳಿ ಮಾಡಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪೂರ್ವ ತಯಾರಿ ಮಾಡಿಕೊಂಡಿರುವ ಸಿಬಿಐ ಸರ್ಚ್ ವಾರೆಂಟ್ ಪಡೆದು ವ್ಯವಸ್ಥಿತವಾಗಿ ದಾಳಿ ನಡೆಸಿದೆ.
ಬೆಂಗಳೂರು, ಕನಕಪುರ, ಮುಂಬೈ, ದೆಹಲಿಯಲ್ಲಿ ಡಿಕೆ ಸಹೋದರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡಸಿದೆ ಎನ್ನಲಾಗಿದೆ.