alex Certify ಬಿಗ್ ನ್ಯೂಸ್: ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ -‌ ಪರಮೇಶ್ವರ್, ಕೆ.ಎನ್. ರಾಜಣ್ಣಗೆ ಉಸ್ತುವಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ -‌ ಪರಮೇಶ್ವರ್, ಕೆ.ಎನ್. ರಾಜಣ್ಣಗೆ ಉಸ್ತುವಾರಿ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಜಯಚಂದ್ರ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಮತ್ತು ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರ ನೇತೃತ್ವದಲ್ಲಿ ಉಪಚುನಾವಣೆ ನಡೆಯಲಿದ್ದು, ಎಲ್ಲಾ ನಾಯಕರು ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ. ಇಂದಿನಿಂದಲೇ ಚುನಾವಣೆ ಕೆಲಸ ಕಾರ್ಯಾರಂಭ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...