ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ. ಆಗಸ್ಟ್ 24 ರಿಂದ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಬೇಕಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಲಾಗಿದೆ ಎನ್ನಲಾಗಿದೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ಈ ಕುರಿತು ಮಾಹಿತಿ ನೀಡಿದ್ದಾರೆ. ಗೋಕಾಕ್, ಅರಭಾವಿ ಕ್ಷೇತ್ರದ ನೆರೆಪೀಡಿತ ಪ್ರದೇಶಗಳಿಗೆ ಡಿ.ಕೆ. ಶಿವಕುಮಾರ್ ಭೇಟಿ ನೀಡಬೇಕಿತ್ತು. ಅನಾರೋಗ್ಯದ ಕಾರಣ ಪ್ರವಾಸ ಮುಂದೂಡಲಾಗಿದೆ. ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಹಲವೆಡೆ ಜನ ಸಂಕಷ್ಟಕ್ಕೆ ಸಿಲುಕಿದ್ದು, ಡಿ.ಕೆ. ಶಿವಕುಮಾರ್ ಭೇಟಿ ನಿಗದಿಯಾಗಿತ್ತು.