ಬೆಂಗಳೂರು: ಆರ್.ಆರ್. ನಗರದ ಉಪ ಚುನಾವಣೆಯಲ್ಲಿ ಗೆಲುವಿಗೆ ಹೊಸ ತಂತ್ರಗಾರಿಕೆ ರೂಪಿಸಿರುವ ಕೆಪಿಸಿಸಿ ಡಿ.ಕೆ. ಶಿವಕುಮಾರ್ ಹಿಂದುತ್ವ ಕಾರ್ಡ್ ಪ್ಲೇ ಮಾಡಿದ್ದು, ಮತದಾರರ ಸೆಳೆಯಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಮಂದಿರ, ಮಸೀದಿಗಳಿಗೂ ಭೇಟಿ ನೀಡಿದ್ದಾರೆನ್ನಲಾಗಿದೆ.
ಹಿಂದೂ ಜಾಗೃತಿ ಸೇನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ. ಶಿವಕುಮಾರ್, ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಸಂಘಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಭಾಷಣ ಮುಗಿಸುತ್ತಾ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕ ಹಿಂದುತ್ವ ಕಾರ್ಡ್ ಬಳಕೆ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಹಿಂದೂ ಎಂದರೆ ಬಿಜೆಪಿ ಆಸ್ತಿನಾ? ನಾವೆಲ್ಲರೂ ಹಿಂದೂಗಳೆ, ಎಲ್ಲಾ ಜಾತಿ, ಧರ್ಮದವರು ಸಾಮರಸ್ಯದಿಂದ ಇರಬಾರದೇ ಎಂದು ಪ್ರಶ್ನಿಸಿದ್ದಾರೆ. ಚುನಾವಣೆಯಲ್ಲಿ ಗೆಲುವಿಗೆ ಡಿ.ಕೆ. ಶಿವಕುಮಾರ್ ತಂತ್ರಗಾರಿಕೆ ಇದಾಗಿದೆ ಎಂದು ಹೇಳಲಾಗಿದೆ.