ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಆದರೆ ನಿಗದಿಯಂತೆಯೇ ಜೂನ್ 14ರಂದು ಕಾರ್ಯಕ್ರಮ ನಡೆಸಬೇಕೆಂಬ ಒತ್ತಡ ಕೇಳಿಬರುತ್ತಿದೆ.
ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ನಿಗದಿಯಂತೆ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಸಬೇಕು. ಸರ್ಕಾರದ ಅನುಮತಿ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಕಾರ್ಯಕ್ರಮ ವೆಬಿನಾರ್ ರೀತಿ ಇರಲಿದೆ. ಕಾರ್ಯಕರ್ತರು ಸ್ಥಳದಲ್ಲಿ ಸೇರುವುದಿಲ್ಲ. ಕೇವಲ ಕೆಲವೇ ಕಾಂಗ್ರೆಸ್ ನಾಯಕರು ಮಾತ್ರ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅವಧಿ ಒಂದೂವರೆ ಗಂಟೆ ಮಾತ್ರ ಇರುತ್ತದೆ. ಹೀಗಾಗಿ ಅನುಮತಿ ನೀಡದಿದ್ದರೂ ಕಾರ್ಯಕ್ರಮವನ್ನು ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಡಿ.ಕೆ. ಶಿವಕುಮಾರ್ ಅವರಿಗೆ ಪದಗ್ರಹಣ ಕಾರ್ಯಕ್ರಮ ನಡೆಸಲು ಒತ್ತಡ ಹೇರಲಾಗಿದೆ. ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ನಡೆಸುವುದಾಗಿ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.