alex Certify ಸೋಮವಾರ ಸೈಕಲ್ ಏರಲಿದ್ದಾರೆ ಕಾಂಗ್ರೆಸ್ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮವಾರ ಸೈಕಲ್ ಏರಲಿದ್ದಾರೆ ಕಾಂಗ್ರೆಸ್ ನಾಯಕರು

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸೈಕಲ್ ಚಳವಳಿ ನಡೆಸಲಾಗುವುದು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 9.30ಕ್ಕೆ ತಮ್ಮ ಮನೆಗಳಿಂದ ಪಕ್ಷದ ಕಚೇರಿಗೆ ಸೈಕಲ್ ನಲ್ಲಿ ಬರಲಿದ್ದಾರೆ.

ನಂತರ ಕೇಂದ್ರ ಸರ್ಕಾರದ ಕಚೇರಿ ಎದರು ಪ್ರತಿಭಟನೆ ನಡೆಯಲಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಏಕ ಕಾಲಕ್ಕೆ ಪ್ರತಿಭಟನೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ, ಭೂ ಸುಧಾರಣೆ ಕಾಯಿದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ತಿದ್ದುಪಡಿ ವಿರೋಧಿಸಿಯೂ ಚಳವಳಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...