ಬೆಂಗಳೂರು: ಇದಕ್ಕೆಲ್ಲ ಹೆದರಲ್ಲ, ಪಕ್ಷಕ್ಕೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ನಿವಾಸದ ಬಳಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಂದಿಟ್ಟ ಹೆಜ್ಜೆಯನ್ನು ಹಿಂದಿಡುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ.
ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರೇರಿತ ದಾಳಿಗೆ ಜಗ್ಗುವುದಿಲ್ಲ. ನಾವಂತೂ ಹೆದರಿಕೊಂಡು ಓಡಾಡುವವರಲ್ಲ. ಈ ರೀತಿ ದಾಳಿಗಳಿಂದ ಡಿಕೆಶಿಗೆ ಏನೂ ಆಗುವುದಿಲ್ಲ. ಪಕ್ಷಕ್ಕೆ, ಕಾರ್ಯಕರ್ತರಿಗೆ ಕಪ್ಪು ಚುಕ್ಕಿ ಬಾರದಂತೆ ಕೆಲಸ ಮಾಡುತ್ತೇವೆ. ಡಿ.ಕೆ. ಶಿವಕುಮಾರ್ ಯಾರಿಗೂ ಶರಣಾಗುವುದಿಲ್ಲ ಎಂದು ಹೇಳಿದ್ದಾರೆ.