ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಇಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಗೆ ಜಾಮೀನು ಸಿಗುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಈಗಾಗಲೇ ಮಧ್ಯಂತರ ಜಾಮೀನು ಪಡೆದು ಬೆನ್ನು ನೋವು ಚಿಕಿತ್ಸೆಗೆಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ದಾಖಲಾಗಿದ್ದಾರೆ. ರೆಗ್ಯೂಲರ್ ಬೇಲ್ ಸುದ್ದಿ ತಿಳಿಯುತ್ತಿದ್ದಂತೆ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಮುಂದೆ ಜಮಾವಣೆಗೊಂಡಿರುವ ನಟ ದರ್ಶನ್ ಅಭಿಮಾನಿಗಳು, ಕೈಯಲ್ಲಿ ಫೋಟೋ ಹಿಡಿದು ಆರತಿ ಬೆಳಗಿ, ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ್ದಾರೆ. ದರ್ಶನ್ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ದಾರೆ.