alex Certify ಕೊರೋನಾದಿಂದ ವೃದ್ಧನ ಸಾವು, ದಾವಣಗೆರೆಯಲ್ಲಿ ಹೆಚ್ಚಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾದಿಂದ ವೃದ್ಧನ ಸಾವು, ದಾವಣಗೆರೆಯಲ್ಲಿ ಹೆಚ್ಚಾಯ್ತು ಆತಂಕ

ದಾವಣಗೆರೆಯಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 69 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶುಕ್ರವಾರ ರಾತ್ರಿ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿತ 556 ಸಾವನ್ನಪ್ಪಿದ್ದಾರೆ. ಅವರ ಪುತ್ರ, ಮೂವರು ಸೊಸೆಯಂದಿರು ಹಾಗೂ ಒಂದು ವರ್ಷದ ಮೊಮ್ಮಗನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು ಕುಟುಂಬದವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧ 28ರಂದು ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ತಜ್ಞ ವೈದ್ಯರು ಚಿಕಿತ್ಸೆ ನೀಡಿದ್ದರು. ಚಿಕಿತ್ಸೆಗೆ ಸ್ಪಂದಿಸದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ದಾವಣಗೆರೆ ಜಾಲಿನಗರದ ಒಂದೇ ಕುಟುಂಬದ ಐವರು ಮತ್ತು ಸೋಂಕಿತ ಸ್ಟಾಫ್ ನರ್ಸ್ ಅವರ ಪುತ್ರನಿಗೆ ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದಾವಣಗೆರೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...