alex Certify ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ, ಓರ್ವ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ, ಓರ್ವ ಅರೆಸ್ಟ್

ದಾವಣಗೆರೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮತ್ತು ಸಿಜೆ ಆಸ್ಪತ್ರೆ ಬಳಿ ಇಂದಿರಾ ಕ್ಯಾಂಟೀನ್ ಗಳಲ್ಲಿರುವ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಭಾರತ್ ಕಾಲೋನಿ 4ನೇ ಕ್ರಾಸ್ ನಿವಾಸಿ ಹೋಟೆಲ್ ಕಾರ್ಮಿಕರಾಗಿರುವ 36 ವರ್ಷದ ಉಮೇಶ್ ಕತ್ತಿ ಬಂಧಿತ ಆರೋಪಿ ಎಂದು ಹೇಳಲಾಗಿದೆ.

ಕೆಟಿಜೆ ನಗರ ಮತ್ತು ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಇಂದಿರಾ ಕ್ಯಾಂಟೀನ್ ಗಳಲ್ಲಿರುವ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ ಉಮೇಶ್ ಕತ್ತಿಯನ್ನು ಬಂಧಿಸಿದ್ದಾರೆ.

ನಾನು ವೀರ ಸಾವರ್ಕರ್ ಅಭಿಮಾನಿಯಾಗಿದ್ದೇನೆ. ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ಇಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರಿಂದ ಮನಸ್ಸಿಗೆ ನೋವಾಗಿ ಮಸಿ ಬಳಿದಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎನ್ನಲಾಗಿದೆ.

ಈ ಹಿಂದೆಯೂ ಈತ ಶಾಂತಿ ಕದಡುವ ಕೃತ್ಯಗಳಲ್ಲಿ ಭಾಗಿಯಾದ ಆರೋಪವಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...