ದಾವಣಗೆರೆ: ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ಸಲುವಾಗಿ ಕಂಟೈನ್‍ಮೆಂಟ್ ವಲಯಗಳಲ್ಲಿ ಜು.30 ರವರೆಗೆ ಲಾಕ್‍ಡೌನ್ ವಿಸ್ತರಿಸಿ, ಕಂಟೈನ್‍ಮೆಂಟ್ ವಲಯ ಹೊರತುಪಡಿಸಿದ ಪ್ರದೇಶಗಳಲ್ಲಿ ತೆರವು 2 ಕ್ಕೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇವುಗಳು ಜುಲೈ. 31 ರವರಗೆ ಜಾರಿಯಲ್ಲಿರುತ್ತದೆ.
ಆ ಪ್ರಕಾರ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಪ್ರತ್ಯೆಕತೆಯನ್ನು ಅಳವಡಿಸಿಕೊಳ್ಳುವುದು ಅತಿ ಪ್ರಾಮುಖ್ಯವಾಗಿದೆ. ಬೃಹತ್ ಸಾರ್ವಜನಿಕ ಸಭೆ, ಸಮಾರಂಭಗಳನ್ನು, ಒಗ್ಗೂಡುವಿಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅನೂಕೂಲವಾಗುವಂತೆ ಹರಿಹರದಲ್ಲಿ ಜು.14 ರಂದು ಕುರಿ ಸಂತೆಯನ್ನು ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಪ್ರಕಾರ ಕಲಂ 188 ಮತ್ತು 270, ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.