alex Certify ಗಮನಿಸಿ: ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಉಡುಪಿ – ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಅಧಿಸೂಚನೆ ಹೊರಡಿಸಲಾಗಿದೆ.

ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟಿಯ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಕಿರಿದಾದ ಆಗುಂಬೆ ಘಾಟಿಯ ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದ್ದು ಭಾರಿ ಸರಕು ಸಾಗಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳಿಗೆ ಕಾರಣವಾಗುವ ಸಂಭವ ಇದ್ದ ಹಿನ್ನೆಲೆಯಲ್ಲಿ ಜೂನ್ 15 ರಿಂದ ಅಕ್ಟೋಬರ್ 15 ರವರೆಗೆ 12 ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಶಿವಮೊಗ್ಗ ಪೊಲೀಸ್ ಅಧೀಕ್ಷಕರ ವರದಿಯ ಅನ್ವಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಸತತ ಮಳೆಯಾಗುವ ದಿನಗಳಂದು 12 ಟನ್ ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ. ಭಾರಿ ಮಳೆ ಇಲ್ಲದಿರುವ ದಿನಗಳಲ್ಲಿ ಎಲ್ಲ ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸತತ ಮತ್ತು ಭಾರಿ ಮಳೆಯಾಗುವ ಸಂದರ್ಭದಲ್ಲಿ 12 ಟನ್ ಗಿಂತ ಅಧಿಕ ಭಾರದ ವಾಹನಗಳು ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಶೃಂಗೇರಿ – ಕೆರೆಕಟ್ಟೆ – ಕಾರ್ಕಳ – ಉಡುಪಿ – ಮಂಗಳೂರು ಹಾಗೂ ಶಿವಮೊಗ್ಗ – ತೀರ್ಥಹಳ್ಳಿ – ಮಾಸ್ತಿಕಟ್ಟೆ – ಹುಲಿಕಲ್ – ಹೊಸಂಗಡಿ – ಸಿದ್ದಾಪುರ – ಉಡುಪಿ ಮಾರ್ಗವಾಗಿ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...