ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಡಗು ಮೀಜಾರು ನಿವಾಸಿ ರಂಜಿತ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಅನಧಿಕೃತವಾಗಿ ಜಾನುವಾರು ಸಾಗಣೆ ಮಾಡುವ ಸಂದರ್ಭದಲ್ಲಿ ಜನ ಕಾನೂನು ಉಲ್ಲಂಘಿಸಿದರೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಡಿಸಿ ತಿಳಿಸಿದ್ದರು. ನಿಯಮ ಉಲ್ಲಂಘಿಸಿ ಹಲ್ಲೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಿಂಧೂ ಬಿ. ರೂಪೇಶ್ ಅವರಿಗೆ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಸ್ವಯಂ ಪ್ರಕರಣ ದಾಖಲಿಸಿಕೊಂಡ ಮೂಡಬಿದರೆ ಠಾಣೆ ಪೊಲೀಸರು ರಂಜಿತ್ ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.