alex Certify ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ನಾಳೆ ಬೆಳಗ್ಗೆಯಿಂದ ರಾತ್ರಿವರೆಗೆ ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ನಾಳೆ ಬೆಳಗ್ಗೆಯಿಂದ ರಾತ್ರಿವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ: ಆ.5 ರಂದು ಪ್ರಧಾನಮಂತ್ರಿ ಮೋದಿ ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಯೋಧ್ಯ ವಿಚಾರವನ್ನು ಅತೀ ಸೂಕ್ಷ್ಮ ವಿಚಾರವಾಗಿ ಪರಿಗಣಿಸಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಸೇರಿ, ದೇವರ ಫೋಟೊ, ಭಾವಚಿತ್ರಗಳನ್ನಿಟ್ಟು ಯಾವುದೇ ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ಪ್ರತಿಭಟನೆ ನಡೆಸುವುದು ಜೊತೆಗೆ ಯಾವುದೇ ರೀತಿಯ ಭಾವಚಿತ್ರ, ಬ್ಯಾನರ್ಸ್, ಬಂಟಿಂಗ್ಸ್ ಗಳನ್ನು ಹಾಕುವುದನ್ನು ನಿಷೇಧಿಸಲಾಗಿದೆ.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ಇಲ್ಲದೆ ಅಳವಡಿಸಿರುವ ಭಾವಚಿತ್ರ, ಬ್ಯಾನರ್ಸ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲಾಗುವುದು. ಯಾವುದೇ ರೀತಿಯ ಮೆರವಣಿಗೆ, ಬೈಕ್ ರ್ಯಾಲಿ ಮತ್ತು ಇತರೆ ಯಾವುದೇ ರ್ಯಾಲಿಗಳು ಸೇರಿದಂತೆ ಪಟಾಕಿ ಸಿಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಲೈವ್ ಎಲ್‍ಇಡಿ ಡಿಸ್‍ಪ್ಲೇ ಹಾಕುವುದನ್ನು ನಿಷೇಧಿಸಲಾಗಿದೆ. ಆ.4 ಮತ್ತು 5 ರಂದು ಜಿಲ್ಲೆಯ ಎಲ್ಲಾ ಪಟಾಕಿ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಕೊರೊನಾ ಹರಡುವಿಕೆ ನಿಯಂತ್ರಣ ಸಂಬಂಧ ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಪೂಜೆ ಕಾರ್ಯಕ್ರಮಗಳನ್ನು ನಡೆಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...