ಬೆಂಗಳೂರು: ಕೊರೋನಾ ಸೋಂಕು ಹೆಚ್ಚಾಗಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ 1 ವಾರ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು.
ಅದೇ ರೀತಿ ಸೋಂಕು ಹೆಚ್ಚಾದ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಬಗ್ಗೆ ಜಿಲ್ಲಾಧಿಕಾರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಪಂ ಸಿಇಒಗಳು, ಡಿಹೆಚ್ಒಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಚರ್ಚೆ ನಡೆಸಲಿದ್ದು, ಜಿಲ್ಲೆಗಳಲ್ಲಿ ಲಾಕ್ಡೌನ್ ಬಗ್ಗೆ ನಾಳೆ ಪ್ರಸ್ತಾಪಿಸುವ ಸಾಧ್ಯತೆ ಇದೆ.
ಲಾಕ್ಡೌನ್ ಮಾಡಲು ಸಭೆಯಲ್ಲಿ ಪ್ರಸ್ತಾಪ ಮಾಡಿದರೆ ಲಾಕ್ಡೌನ್ ನಿರ್ಧಾರ ಜಿಲ್ಲಾಡಳಿತಗಳಿಗೆ ಬಿಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ರಾಜ್ಯಗಳ ವಿವೇಚನೆಗೆ ಬಿಟ್ಟಿರುವಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಗಳ ವಿವೇಚನೆಗೆ ಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.