ಬೆಂಗಳೂರು: ಲಾಕ್ಡೌನ್ ನಡುವೆಯೂ ಕಲಬುರ್ಗಿ ಜಿಲ್ಲಾಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ. ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ಕಲ್ಬುರ್ಗಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರ ನಡುವೆಯೇ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.