alex Certify ‘ಸರ್ಕಾರ ಸುಭದ್ರ, ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸರ್ಕಾರ ಸುಭದ್ರ, ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ’

ಮೈಸೂರು: ರಾಜ್ಯ ಸರ್ಕಾರ ಸುಭದ್ರವಾಗಿರುತ್ತದೆ. ಸರ್ಕಾರವನ್ನು ಏನು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಕಿತ್ತಾಟಕ್ಕೆ ಅವಕಾಶವಿಲ್ಲ. ನಮ್ಮ ಪಕ್ಷದಲ್ಲಿ ಲಕ್ಷ್ಮಣರೇಖೆ ದಾಟುವವರು ಇಲ್ಲ. ಬೇರೆ ಪಕ್ಷದಲ್ಲಿ ಇರುವ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಂತರಿಕ ಕಚ್ಚಾಟದಿಂದ ಯಾವ ಸರ್ಕಾರಕ್ಕೆ ತೊಂದರೆಯಾಗಿದೆ. ಆಂತರಿಕ ಕಚ್ಚಾಟ ಎಂದರೆ ಏನು ಎಂಬುದು ಸಿದ್ದರಾಮಯ್ಯನವರಿಗೆ ಚೆನ್ನಾಗಿ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಪಕ್ಷ ಎಂದಮೇಲೆ ಕೆಲವರಿಗೆ ಸಣ್ಣಪುಟ್ಟ ಅಪೇಕ್ಷೆಗಳು ಇರುತ್ತವೆ. ಅದನ್ನು ಕೇಳುವ ರೀತಿ ಸರಿಯಿಲ್ಲ. ಮುಖ್ಯಮಂತ್ರಿಯವರೊಂದಿಗೆ ಶಾಸಕರು ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಬೇಕಿತ್ತು. ಅದರ ಬದಲಿಗೆ ಅವರು ಸಭೆ ನಡೆಸಿದ್ದು ಸರಿಯಲ್ಲ ಎಂಬುದನ್ನು ನಾನು ಒಪ್ಪುತ್ತೇನೆ. ಈ ಬಗ್ಗೆ ಪಕ್ಷದ ವರಿಷ್ಠರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...