alex Certify ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೃಪಾಂಕ: ಡಿಸಿಎಂ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೃಪಾಂಕ: ಡಿಸಿಎಂ ʼಗುಡ್ ನ್ಯೂಸ್ʼ

ಬೆಂಗಳೂರು: ಇಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಉಪ ಕುಲಪತಿ ಪ್ರೊ. ಕರಿಸಿದ್ದಪ್ಪ ಅವರೊಂದಿಗೆ ಇಂದು ಚರ್ಚೆ ಮಾಡಿದ್ದೇನೆ. ಕಾನೂನು ಪರಿಮಿತಿಯಲ್ಲಿ ಈ ಸಂಬಂಧ ಯಾವ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕೋ ಅದನ್ನು ಕೂಡಲೇ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಪರೀಕ್ಷೆಗೆ ನೀಡಲಾಗಿದ್ದ ಪ್ರಶ್ನೆಗಳಲ್ಲಿ ಬಹು ಆಯ್ಕೆಗಳನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ತಮಗಿಷ್ಟವಾದ ಪ್ರಶ್ನೆಯನ್ನು ಆಯ್ಕೆ ಮಾಡಿಕೊಂಡು ಉತ್ತರ ಬರೆಯುವ ಮುಕ್ತ ಅವಕಾಶವನ್ನು ನೀಡಲಾಗಿತ್ತು. ಹಾಗಿದ್ದರೂ ಸರ್ಕಾರ ವಿದ್ಯಾರ್ಥಿಗಳ ಹಿತವನ್ನು ಕಡೆಗಣಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ಅಂತಿಮ ವರ್ಷದ ಇಂಜಿನಿಯರಿಂಗ್‌ ಪರೀಕ್ಷೆ ಉತ್ತಮವಾಗಿ ನಡೆದಿದೆ. ಶೇ.99 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಕಳೆದ ವರ್ಷಗಳಲ್ಲಿ ನಡೆದ ಪರೀಕ್ಷೆಗಳಿಗೆ ಹೋಲಿಸಿದರೆ ಈ ವರ್ಷ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದು ಖಂಡಿತಾ ಉತ್ತಮ ಪ್ರಮಾಣ ಮತ್ತು ಬೆಳವಣಿಗೆ. ಇನ್ನು ಈ ಪರೀಕ್ಷೆಗೆ ಯಾರು ಹಾಜರಾಗಿಲ್ಲ, ಅಂಥವರಿಗೆ ಕ್ಯಾರಿಓವರ್‌ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಮುಂದಿನ ಸೆಮಿಸ್ಟರ್‌ ಹೊತ್ತಿಗೆ ಅವರು ಪರೀಕ್ಷೆ ಬರೆಯಬಹುದು. ಉಳಿದಂತೆ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳಿದ್ದರೆ ಅದಕ್ಕೆ ಕೃಪಾಂಕ ಕೊಡಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...