alex Certify ಸಾರಿಗೆ ಸಿಬ್ಬಂದಿಗೆ ಡಿಸಿಎಂ ಲಕ್ಷ್ಮಣ ಸವದಿ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಸಿಬ್ಬಂದಿಗೆ ಡಿಸಿಎಂ ಲಕ್ಷ್ಮಣ ಸವದಿ ʼಗುಡ್ ನ್ಯೂಸ್ʼ

ಬೆಳಗಾವಿ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ 2652 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ಹೀಗಿದ್ದರೂ ಸಿಬ್ಬಂದಿಗೆ ವೇತನ ನೀಡಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 126 ಕೋಟಿ ರೂ. ವೇತನ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸಾರಿಗೆ ಸಿಬ್ಬಂದಿಗೆ ವೇತನ ರಹಿತ ರಜೆ ಪಡೆಯಲು ಒತ್ತಡ ಹಾಕಿಲ್ಲ. ವೇತನವನ್ನು ನಿಲ್ಲಿಸುವುದಿಲ್ಲ ಎಂದು ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...