ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2062 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 28,877 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 778 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,876 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,527 ಕ್ಕೆ ಏರಿಕೆಯಾಗಿದೆ. 452 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಒಂದೇ ದಿನ 54 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಕೊರನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 470 ಕ್ಕೆ ಏರಿಕೆಯಾಗಿದೆ.