ಮಂಗಳೂrರು ಹೊರವಲಯದ ಗುರುಪುರ ಬಳಿ ಬಂಗ್ಲೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಬಾಲಕ, ಬಾಲಕಿ ಪತ್ತೆಯಾಗಿದ್ದು ಇಬ್ಬರೂ ಮೃತಪಟ್ಟಿದ್ದಾರೆ.
ಸತತ 4 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಮಣ್ಣಿನಡಿ ಸಿಲುಕಿದ್ದ ಬಾಲಕ, ಬಾಲಕಿಯನ್ನು ಪತ್ತೆ ಮಾಡಲಾಗಿದ್ದು, ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಇಬ್ಬರೂ ಪತ್ತೆಯಾದ ಕೂಡಲೇ ಆಂಬುಲೆನ್ಸ್ ನಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆದರೆ, ಮಣ್ಣಿನಡಿ ಸಿಲುಕಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ. 16 ವರ್ಷದ ಬಾಲಕ ಮತ್ತು 10 ವರ್ಷದ ಬಾಲಕಿ ಮಣ್ಣಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಗುಡ್ಡದ ಅಂಚಿನಲ್ಲಿದ್ದ ನಾಲ್ಕು ಮನೆಗಳ ಮೇಲೆ ಮಣ್ಣು ಕುಸಿದು ಬಿದ್ದಿದ್ದು, ಸುಮಾರು 30 ಅಡಿಯಷ್ಟು ಮಣ್ಣು ಕುಸಿದು ಮನೆಯೊಳಗಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದರು. ಸತತ ಕಾರ್ಯಾಚರಣೆ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದರೆನ್ನಲಾಗಿದೆ.