alex Certify ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ 25 ಲಕ್ಷ ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ 25 ಲಕ್ಷ ರೂ. ದಂಡ

ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಸಂದೇಶ ...

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಅವಹೇಳನಾಕಾರಿ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ ಬೆಳ್ತಂಗಡಿ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ 25 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಗುರುವಾಯನಕೆರೆಯ ಕೆ. ಸೋಮನಾಥ್ ನಾಯಕ್ ಎಂಬ ಈ ವ್ಯಕ್ತಿ, ವೀರೇಂದ್ರ ಹೆಗ್ಗಡೆಯವರ ಕುರಿತು ಸುಳ್ಳು ಎಸ್ಎಂಎಸ್ ರವಾನಿಸಿದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಅಂದಿನ ಮ್ಯಾನೇಜರ್ ಉಡುಪ ಎಂಬವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ನ್ಯಾಯಾಲಯ ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದರೂ ಸಹ ಮತ್ತೆ ಸುಳ್ಳು ಎಸ್ಎಂಎಸ್ ರವಾನಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಷ್ಟ ಪರಿಹಾರವಾಗಿ 25 ಲಕ್ಷ ರೂ. ನೀಡಲು ಆದೇಶಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...