alex Certify ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸ್ಮಾರ್ಟ್ ಸಿಟಿಗಳ ಅಡಿಯಲ್ಲಿ ತಾಂತ್ರಿಕ ಶಿಕ್ಷಣ ಹಿನ್ನಲೆಯ ಸುಮಾರು 25000 ಹೊಸ ಪದವೀಧರರಿಗೆ ನಗರ ಯೋಜನೆ, ಹಣಕಾಸು, ಪರಿಸರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪ್ರಾಯೋಗಿಕ ತರಬೇತಿ ಪಡೆಯಲು ಅನುವಾಗುವ ಇಂಟರ್ನ್‍ಶಿಪ್ (The Urban Learning Internship Programme-TULIP) ಯೋಜನೆಗೆ  ಚಾಲನೆ ನೀಡಿದೆ.

ಈ ಯೋಜನೆಯಿಂದ ರಾಷ್ಟ್ರದಲ್ಲಿ ಸುಮಾರು 4400 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 100 ಸ್ಮಾರ್ಟ್ ಸಿಟಿಗಳ ವ್ಯಾಪ್ತಿಯಲ್ಲಿ ಯುವಕರು ಹೊಸ ವಿಚಾರಗಳನ್ನು ಅಳವಡಿಸಿಕೊಳ್ಳಲು ಅವಕಾಶವಿದ್ದು, ತರಬೇತಿ ಪಡೆದ ಅಭ್ಯರ್ಥಿಗಳು ಹಲವು ಉದ್ಯೋಗಾವಕಾಶಗಳಿಗೂ ಅರ್ಹತೆ ಪಡೆಯುವ ಸಾಧ್ಯತೆ ಇರುತ್ತದೆ.

5 ವರ್ಷಗಳ ಅವಧಿಯ ಈ ಯೋಜನೆಯು ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ ಮತ್ತು ಅಖಿಲ ಭಾರತದ ತಾಂತ್ರಿಕ ಶಿಕ್ಷಣ ಸಮಿತಿಯ ಜಂಟಿ ಸಹಯೋಗದೊಂದಿಗೆ ನಿರ್ವಹಿಸಲ್ಪಡುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು https://internship.aicte-india.org  ಜಾಲತಾಣದಲ್ಲಿ ಪಡೆಯಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...