ಬೆಂಗಳೂರು: ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದಾರೆ.
ಒಂದು ವಾರದೊಳಗೆ ಸರ್ಕಾರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಕೊರೋನಾ ಮತ್ತು ಇತರ ಚಿಕಿತ್ಸೆಗಳನ್ನು ಸ್ಥಗಿತ ಮಾಡಲಾಗುವುದು. ತುರ್ತು ಚಿಕಿತ್ಸೆ ಮಾತ್ರ ನೀಡಲಾಗುವುದು ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಜಿ.ಎ. ಶ್ರೀನಿವಾಸ್ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ವ್ಯಾಪ್ತಿಯ 4968 ವೈದ್ಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒಂದು ವಾರ ಗಡುವು ನೀಡಿದ್ದಾರೆ. ಇಲ್ಲದಿದ್ದರೆ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಆಯುಷ್ ವೈದ್ಯರ ವೇತನ ಪರಿಷ್ಕರಣೆ ಬೇಡಿಕೆಗೆ ಸರ್ಕಾರ ಸ್ಪಂದಿಸಿ ಬೇಡಿಕೆ ಈಡೇರಿಸಿದೆ. ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದಲೂ ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ಮುಷ್ಕರಕ್ಕೆ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.