alex Certify ತೀರ್ಥಯಾತ್ರಾ ಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೀರ್ಥಯಾತ್ರಾ ಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕರ್ನಾಟಕದಲ್ಲಿನ ಪರಶುರಾಮ ಕ್ಷೇತ್ರದ ಸಪ್ತ ಮುಕ್ತಿಸ್ಥಳದ ತೀರ್ಥಯಾತ್ರಾ ತಾಣಗಳ ಪೈಕಿ ಇದು ಒಂದು. ಮಂಗಳೂರಿನಿಂದ 147 ಕಿ.ಮೀ.ಗಳಷ್ಟು ಅಂತರದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿ ನೆಲೆಗೊಂಡಿರುವ ಈ ದೇವಸ್ಥಾನಕ್ಕೆ ಪ್ರತಿವರ್ಷವೂ ಲಕ್ಷಗಟ್ಟಲೆ ಯಾತ್ರಾರ್ಥಿಗಳು ಬರುತ್ತಾರೆ. ಹೆಚ್ಚಾಗಿ ಇಲ್ಲಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿನ ಜನರು ಬರುತ್ತಾರೆ.

ಸೌಪರ್ಣಿಕಾ ನದಿಯ ದಂಡೆಗಳು ಮತ್ತು ಸೊಂಪಾಗಿ ರಸಭರಿತವಾಗಿರುವ ಹಸಿರು ಹುಲ್ಲಿನಿಂದಾವೃತವಾದ ಕೊಡಚಾದ್ರಿ ಬೆಟ್ಟದ ತಪ್ಪಲು ಪ್ರದೇಶದಲ್ಲಿ ಈ ದೇವಸ್ಥಾನ ಕಾಣಸಿಗುತ್ತದೆ. ಮುಖ್ಯವಾಗಿ ಪೂಜ್ಯಭಾವನೆಯಿಂದ ಕಾಣಲ್ಪಡುವ ಹಿಂದೂ ಸಂತ ಮತ್ತು ವೈದಿಕ ವಿದ್ವಾಂಸ ಆದಿ ಶಂಕರರೊಂದಿಗೆ ಈ ದೇವಸ್ಥಾನವು ಸಂಬಂಧವನ್ನು ಹೊಂದಿರುವ ಕ್ಷೇತ್ರವಾಗಿರುವುದರಿಂದ, ಭಕ್ತ-ಸಮುದಾಯಕ್ಕೆ ಸಂಬಂಧಿಸಿದಂತೆ ಇದು ಅಗಾಧವಾದ ಪ್ರಸ್ತುತತೆಯನ್ನು ಹೊಂದಿದೆ.

ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಿಯ ದೇವಸ್ಥಾನವೊಂದನ್ನು ಸ್ಥಾಪಿಸುವ ಪರಿಕಲ್ಪನೆಯನ್ನು ಆದಿ ಶಂಕರರು ಗ್ರಹಿಸಿದರು ಮತ್ತು ಸುಮಾರು 1700 ವರ್ಷಗಳಷ್ಟು ಹಿಂದೆಯೇ ದೇವಸ್ಥಾನದಲ್ಲಿ ದೇವತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿದರು ಎಂದು ನಂಬಲಾಗಿದೆ. ಮೂಕಾಂಬಿಕಾ ದೇವತೆಯು ಶಕ್ತಿ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವಿರ್ಭವಿಸುವಿಕೆ ಅಥವಾ ಅವತಾರ ಎಂಬುದಾಗಿ ಪರಿಗಣಿಸಲ್ಪಟ್ಟಿರುವುದರಿಂದ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಜನರು ಅತೀವವಾದ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ.

ಶಿವ ಮತ್ತು ಶಕ್ತಿ ಈ ಇಬ್ಬರನ್ನೂ ಸಂಯೋಜಿಸಿರುವ ಜ್ಯೋತಿರ್ಲಿಂಗದ ಸ್ವರೂಪದಲ್ಲಿ ಈ ದೇವತೆಯು ಕಂಡುಬರುತ್ತಾಳೆ. ಶ್ರೀಚಕ್ರದ ಮೇಲೆ ಸ್ಥಾಪಿಸಲಾಗಿರುವ ದೇವತೆಯ ಪಂಚಲೋಹದ ವಿಗ್ರಹವನ್ನು ಆದಿ ಶಂಕರಾಚಾರ್ಯರು ಈ ಸ್ಥಳಕ್ಕೆ ತಾವು ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಷ್ಠಾಪಿಸಿದರು ಎಂದು ಹೇಳಲಾಗುತ್ತದೆ.

ನವೆಂಬರ್‌ನಲ್ಲಿ ನಡೆಯುವ ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ, ದೇವಸ್ಥಾನವು ಭಕ್ತರ ದಟ್ಟಣೆಯಿಂದ ಕೂಡಿರುತ್ತದೆ. ಜನ್ಮಾಷ್ಟಮಿ ಅಥವಾ ಕೃಷ್ಣ ಜಯಂತಿ ಕೂಡ ಇಲ್ಲಿನ ಒಂದು ಜನಪ್ರಿಯ ಉತ್ಸವ ಎನಿಸಿಕೊಂಡಿದೆ. ನವರಾತ್ರಿ ಉತ್ಸವದ ಕೊನೆಯ ದಿನದಂದು ಇಲ್ಲಿನ ಸರಸ್ವತಿ ಮಂಟಪದಲ್ಲಿ, ಪುಟ್ಟ ಮಕ್ಕಳಿಗೆ ಅವರದೇ ಮಾತೃಭಾಷೆಯ ವರ್ಣಮಾಲೆಯ ಅಕ್ಷರಗಳಲ್ಲಿ ದೀಕ್ಷೆ ಅಥವಾ ಉಪದೇಶವನ್ನು ನೀಡಲಾಗುತ್ತದೆ ಮತ್ತು ಇದು ವಿದ್ಯಾರಂಭದ ದ್ಯೋತಕವಾಗಿರುತ್ತದೆ.

ಇನ್ನು ಪ್ರಮುಖವಾಗಿ ಇಲ್ಲಿಗೆ ಮಂಗಳೂರು, ಉಡುಪಿ ಮತ್ತು ಕುಂದಾಪುರಗಳಿಂದ ರಸ್ತೆ ಮೂಲಕ ಸಂಪರ್ಕವನ್ನು ಹೊಂದಬಹುದಾಗಿದೆ. ಇಲ್ಲಿಗೆ ನೇರ ಬಸ್ಸುಗಳಿದ್ದು, ಕೊಂಕಣ ರೈಲ್ವೆ ಮಾರ್ಗದಲ್ಲಿರುವ ಮೂಕಾಂಬಿಕಾ ರೋಡ್‌‌ (ಬೈಂದೂರು) ಅಥವಾ ಕುಂದಾಪುರ ಇಲ್ಲಿಗೆ ಅತಿ ಸನಿಹದ ರೈಲ್ವೆ ನಿಲ್ದಾಣವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...