ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣೆಯಲ್ಲಿ ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಯತ್ನಿಸಿದ ಯುವತಿಯ ತಾಯಿ ಮತ್ತು ಸೋದರರ ವಿರುದ್ಧ ಕೇಸ್ ದಾಖಲಾಗಿದೆ.
ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದ ಕಂಠಿ ದುರ್ಗಮ್ಮ ದೇವಾಲಯದಲ್ಲಿ ಯುವತಿಯನ್ನು ದೇವದಾಸಿಯಾಗಿ ಮಾಡಲು ತೀರ್ಮಾನಿಸಲಾಗಿತ್ತು. ಖಚಿತ ಮಾಹಿತಿ ಪಡೆದ ದೇವದಾಸಿ ಪುನರ್ವಸತಿ ಯೋಜನೆ ಯೋಜನಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ಕುಟುಂಬದವರೊಂದಿಗೆ ಮಾತನಾಡಿ ಜಾಗೃತಿ ಮೂಡಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.