alex Certify ಯುವತಿಯನ್ನು ದೇವದಾಸಿ ಮಾಡಲು ಯತ್ನ: ತಾಯಿ, ಸೋದರರ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯನ್ನು ದೇವದಾಸಿ ಮಾಡಲು ಯತ್ನ: ತಾಯಿ, ಸೋದರರ ವಿರುದ್ಧ ದೂರು

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣೆಯಲ್ಲಿ ಯುವತಿಯನ್ನು ದೇವದಾಸಿ ಪದ್ಧತಿಗೆ ದೂಡಲು ಯತ್ನಿಸಿದ ಯುವತಿಯ ತಾಯಿ ಮತ್ತು ಸೋದರರ ವಿರುದ್ಧ ಕೇಸ್ ದಾಖಲಾಗಿದೆ.

ಲಿಂಗಸುಗೂರು ತಾಲೂಕಿನ ರಾಮತ್ನಾಳ ಗ್ರಾಮದ ಕಂಠಿ ದುರ್ಗಮ್ಮ ದೇವಾಲಯದಲ್ಲಿ ಯುವತಿಯನ್ನು ದೇವದಾಸಿಯಾಗಿ ಮಾಡಲು ತೀರ್ಮಾನಿಸಲಾಗಿತ್ತು. ಖಚಿತ ಮಾಹಿತಿ ಪಡೆದ ದೇವದಾಸಿ ಪುನರ್ವಸತಿ ಯೋಜನೆ ಯೋಜನಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿ ಕುಟುಂಬದವರೊಂದಿಗೆ ಮಾತನಾಡಿ ಜಾಗೃತಿ ಮೂಡಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...