ಬೆಂಗಳೂರು: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಕಾರ್ಮಿಕ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಬೇಕೆಂದು ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ಕಾರ್ಮಿಕ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಮೂಲಕ ಸರ್ಕಾರ ಜನರನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ದೂರಿದ್ದಾರೆ.
ಭೂ ಸುಧಾರಣೆ ತಿದ್ದುಪಡಿ ಅತ್ಯಂತ ಕೆಟ್ಟ ನಿರ್ಧಾರವಾಗಿದೆ. ಬಹುಮತ ಇದೆ ಎನ್ನುವ ಕಾರಣಕ್ಕೆ ರೈತರಿಗೆ ಅನ್ಯಾಯ ಮಾಡಿದರೆ ಸುಮ್ಮನೆ ಇರಲು ಸಾಧ್ಯವಿಲ್ಲ. ರೈತರು, ಕಾರ್ಮಿಕರನ್ನು ಬೀದಿ ಪಾಲು ಮಾಡುವ ಕಾಯ್ದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.