alex Certify BIG NEWS: ಮಾಜಿ ಸಿಎಂ ಸಿದ್ಧರಾಮಯ್ಯಗೆ ದೇವೇಗೌಡರ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಸಿದ್ಧರಾಮಯ್ಯಗೆ ದೇವೇಗೌಡರ ಟಾಂಗ್

ಕೊರೊನಾ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಟಾಂಗ್ ಕೊಟ್ಟಿದ್ದಾರೆ.

ಕೊರೊನಾ ಸಂಬಂಧಿತ ಖರೀದಿಯಲ್ಲಿ ಕೇಳಿಬಂದಿರುವ ಆರೋಪಗಳ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚೆ ಆಗಲಿ ಎಂದು ಹೇಳಿದ್ದಾರೆ. ಮೊದಲು ಜನರ ಆರೋಗ್ಯದ ಬಗ್ಗೆ ಗಮನಹರಿಸಬೇಕಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಟಾಂಗ್ ಕೊಟ್ಟಿದ್ದಾರೆ.

ಮೊದಲು ಜನರ ಆರೋಗ್ಯದ ಕಡೆ ಗಮನ ಹರಿಸಬೇಕು. ರಾಜ್ಯಾದ್ಯಂತ ಲಾಕ್ಡೌನ್ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಇದರೊಂದಿಗೆ ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಬೇಕೆಂದು ಹೇಳಿದ್ದಾರೆ.

ಮೊದಲು ಜನರ ಆರೋಗ್ಯದ ಕಡೆ ಗಮನ ಹರಿಸೋಣ. ನಮಗೆ ಜನತೆಯ ಆರೋಗ್ಯ ಮುಖ್ಯವಾಗಿದೆ. ಅವ್ಯವಹಾರ ಕುರಿತು ಇದೀಗ ಚರ್ಚೆ ಬೇಡ. ಅಧಿವೇಶನದಲ್ಲಿ ಚರ್ಚೆ ಮಾಡಬಹುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...