alex Certify BIG NEWS: ಡಿಜಿ ಹಳ್ಳಿ ಗಲಭೆ – ನ್ಯಾಯಾಲಯಗಳ ಮಾದರಿಯಲ್ಲೇ ಮ್ಯಾಜಿಸ್ಟ್ರೇಟ್ ತನಿಖೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಜಿ ಹಳ್ಳಿ ಗಲಭೆ – ನ್ಯಾಯಾಲಯಗಳ ಮಾದರಿಯಲ್ಲೇ ಮ್ಯಾಜಿಸ್ಟ್ರೇಟ್ ತನಿಖೆ ಆರಂಭ

ಬೆಂಗಳೂರು: ದೇವರಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಯನ್ನು ನ್ಯಾಯಾಲಯಗಳ ಮಾದರಿಯಲ್ಲೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಿ.ಎನ್ ಶಿವಮೂರ್ತಿ ತಿಳಿಸಿದ್ದಾರೆ.

ಇಂದು ನಗರದ ದೇವರಜೀವನಹಳ್ಳಿ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಆಗಸ್ಟ್ 11 ರಂದು ನಡೆದ ದೇವರಜೀವನಹಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಹಳ್ಳಿ ಗಲಭೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದರು. ಅಲ್ಲದೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಾರ್ಗಸೂಚಿಯಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭ ಮಾಡುತ್ತೇನೆ, ಸೆಪ್ಟೆಂಬರ್ 2ರಿಂದ ಈ ಪ್ರಕರಣದ ಸಂಪೂರ್ಣ ವಿಚಾರಣೆ ಪ್ರಾರಂಭವಾಗುತ್ತದೆ. ಮ್ಯಾಜಿಸ್ಟ್ರೇಟ್ ತನಿಖೆಯ ವರದಿ ನೀಡಲು ಸರ್ಕಾರ ಮೂರು ತಿಂಗಳು ಗಡುವು ನೀಡಿದೆ ಎಂದು ಹೇಳಿದ್ದಾರೆ.

ಗಲಭೆ ಪ್ರಕರಣ ಸಂಬಂಧ ಈವರೆಗೆ ಒಟ್ಟು 388 ವ್ಯಕ್ತಿಗಳನ್ನು ಬಂಧಿಸಿಲಾಗಿದೆ. 55 ಡಿ.ಜಿ ಹಳ್ಳಿ ಹಾಗೂ 16 ಕೆ.ಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಸಾಮಾನ್ಯ ಜನರು ಸೇರಿದಂತೆ 53 ಪೊಲೀಸ್, 15 ಕೆ.ಎಸ್.ಆರ್.ಪಿ. ಸಿಬ್ಬಂದಿ ಸೇರಿ ಒಟ್ಟು 70 ಮಂದಿಗೆ ಗಾಯಗಳಾಗಿವೆ. ಪ್ರಕರಣದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ 126 ವಾಹನಗಳು, ಕಟ್ಟಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸುಟ್ಟ ವಾಹನಗಳ ನಷ್ಟದ ಒಟ್ಟು ಮೊತ್ತ ಸಾರಿಗೆ ಅಧಿಕಾರಿಗಳು ಅಂದಾಜಿಸಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಗೋಲಿಬಾರ್ ಮತ್ತು ಗಲಭೆಯ ಸಂಪೂರ್ಣ ವಿಚಾರಣೆಯ ಬಳಿಕ ವರದಿ ನೀಡುತ್ತೇನೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು, ಹೇಳಿಕೆಗಳು, ಸಾಕ್ಷಿಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡಬಹುದು. ನೀಡಿದ ಮಾಹಿತಿಯನ್ನು  ನಾವು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದೇ ಸಮಯದಲ್ಲಿ ಪೂರ್ವ ವಲಯದ ಪೊಲೀಸ್ ಉಪ ಆಯುಕ್ತರಾದ ಡಾ.ಶರಣಪ್ಪ ಎಸ್.ಢಗೆ, ಎಸಿಪಿ, ಸಿಸಿಬಿ ಅಧಿಕಾರಿಗಳು ಮತ್ತು ಬೆಂಗಳೂರು ಉತ್ತರ ವಿಭಾಗದ ತಹಶಿಲ್ದಾರರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...