
ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ ಮೂವರು ಮೃತಪಟ್ಟಿದ್ದು ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 277 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು, ಒಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.
387 ಮಂದಿ ಇವತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 2519 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
