alex Certify SHOCKING: 2 ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಕೊರೊನಾ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: 2 ಜಿಲ್ಲೆ ಹೊರತುಪಡಿಸಿ ಉಳಿದ ಕಡೆ ಕೊರೊನಾ ದಾಳಿ

ಬೆಂಗಳೂರು: ಚಾಮರಾಜನಗರ ಮತ್ತು ಕೊಡಗು ಜಿಲ್ಲೆ ಹೊರತುಪಡಿಸಿ 28 ಜಿಲ್ಲೆಗಳ ಮೇಲೆ ಕೊರೋನಾ ದಾಳಿ ನಡೆಸಿದೆ. ಬೆಂಗಳೂರು ನಗರ 1148, ದಕ್ಷಿಣ ಕನ್ನಡ 183, ಧಾರವಾಡ 89 ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ 66 ಜನರಿಗೆ ಕೊರೊನಾ ಸೋಂಕು ತಗಲಿದೆ.

ಬಳ್ಳಾರಿ, ಮೈಸೂರು ತಲಾ 59, ಬೆಂಗಳೂರು ಗ್ರಾಮಾಂತರ 37, ರಾಮನಗರ 34, ಚಿಕ್ಕಬಳ್ಳಾಪುರ 32, ಉಡುಪಿ, ಹಾವೇರಿ ತಲಾ 31, ಬೀದರ್ 29, ಬೆಳಗಾವಿ 27, ಹಾಸನ 26, ಬಾಗಲಕೋಟೆ, ತುಮಕೂರು ತಲಾ 24, ಚಿಕ್ಕಮಗಳೂರು 23, ಮಂಡ್ಯ 20, ಉತ್ತರಕನ್ನಡ 19, ದಾವಣಗೆರೆ 18, ರಾಯಚೂರು, ಶಿವಮೊಗ್ಗ ತಲಾ 17, ಕೋಲಾರ 16, ಯಾದಗಿರಿ, ಕೊಪ್ಪಳ ತಲಾ 11, ಗದಗ 5, ವಿಜಯಪುರ 4, ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಇಂದು 2062 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,877 ಕ್ಕೆ ಏರಿಕೆಯಾಗಿದೆ. ಇಂದು 778 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,876 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,527 ಕ್ಕೆ ಏರಿಕೆಯಾಗಿದ್ದು, 452 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 54 ಮಂದಿ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 470 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...