alex Certify ಮತ್ತೆ ಬೆಚ್ಚಿಬಿದ್ದ ಬೆಂಗಳೂರು: 1533 ಮಂದಿಗೆ ಸೋಂಕು, ಇಂದು ಎಲ್ಲಾ ಜಿಲ್ಲೆಯಲ್ಲೂ ಕೊರೊನಾ ದಾಳಿ – ಯಾವ ಜಿಲ್ಲೆಯಲ್ಲಿ ಎಷ್ಟು..? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಬೆಚ್ಚಿಬಿದ್ದ ಬೆಂಗಳೂರು: 1533 ಮಂದಿಗೆ ಸೋಂಕು, ಇಂದು ಎಲ್ಲಾ ಜಿಲ್ಲೆಯಲ್ಲೂ ಕೊರೊನಾ ದಾಳಿ – ಯಾವ ಜಿಲ್ಲೆಯಲ್ಲಿ ಎಷ್ಟು..? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 2798 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1533 ಜನರಿಗೆ ಸೋಂಕು ತಗುಲಿದೆ.

ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,862 ಕ್ಕೆ ಏರಿಕೆಯಾಗಿದೆ. ಇಂದು 404 ಜನ ಬಿಡುಗಡೆಯಾಗಿದ್ದು, ಇದುವರೆಗೆ 3839 ಜನ ಬಿಡುಗಡೆಯಾಗಿದ್ದಾರೆ. 12,793 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 229 ಮಂದಿ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ 65, ಬಳ್ಳಾರಿ 65, ಬೀದರ್ 63, ವಿಜಯಪುರ 48 ಜನರಿಗೆ ಸೋಂಕು ತಗುಲಿದೆ.

ಉತ್ತರ ಕನ್ನಡ 40, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ 23, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ 12, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,216 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 880 ಜನ ಗುಣಮುಖರಾಗಿದ್ದು, ಇದುವರೆಗೆ 14,716 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20,883 ಸಕ್ರಿಯ ಪ್ರಕರಣಗಳು ಇದ್ದು 504 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇಂದು 70 ಮಂದಿ ಮೃತಪಟ್ಟಿದ್ದು, ಇದುವರೆಗೆ 613 ಮಂದಿ ಮೃತಪಟ್ಟಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...