
ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣದ ಉದ್ದೇಶದಿಂದ ರಾಜ್ಯದ 8 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಧಾರವಾಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ.
ಬೆಳಗಾವಿ, ಕೊಪ್ಪಳ, ಹಾವೇರಿ, ಹಾಸನ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾಗಶಃ ಲಾಕ್ಡೌನ್ ಜಾರಿ ಮಾಡಲಾಗಿದೆ. ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಲಾಕ್ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಡುಪಿ ಗಡಿಯನ್ನು ಸೀಲ್ ಡೌನ್ ಮಾಡಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.