
ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಪತ್ನಿ ಕುಸುಮಾ ರವಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ.
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಮಿತಿ ವರದಿ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಜೆಡಿಎಸ್ ಮುಖಂಡರಾದ ಹನುಮಂತರಾಯಪ್ಪ ಮತ್ತು ಕುಸುಮಾ ರವಿ ಭಾನುವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು ರಾಜರಾಜೇಶ್ವರಿನಗರ ಕ್ಷೇತ್ರದಿಂದ ಕುಸುಮಾ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ.