ಹುಬ್ಬಳ್ಳಿ: ವೈದ್ಯಾಧಿಕಾರಿ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಹುಬ್ಬಳ್ಳಿಯ ಉಪನಗರ ಠಾಣೆಗೆ ದೂರು ನೀಡಲಾಗಿದೆ.
ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳೆ ಹಾಗೂ ಆಕೆಯ ಸಹೋದರ ಸಂತೋಷ್ ವಿರುದ್ಧ ಚಿಟಗುಪ್ಪಿ ಆಸ್ಪತ್ರೆಯ ವೈದ್ಯೆ ಡಾ. ಕೋಮಲ್ ಅವರು ದೂರು ನೀಡಿದ್ದಾರೆ.
ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉಪನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಜೂನ್ 19 ರಂದು ರಾತ್ರಿ ಮಹಿಳೆ ಮತ್ತು ಆಕೆಯ ಸಹೋದರ ಹಾಗೂ ಅವರ ಸಂಬಂಧಿಕರು ಚಿಟಗುಪ್ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಅವರ ಮೇಲೆ ಹಲ್ಲೆ ಮಾಡಿ ಆಸ್ಪತ್ರೆಯಲ್ಲಿ ಗಲಾಟೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ಬಳಿಕ ವೈದ್ಯಾಧಿಕಾರಿ ವಿರುದ್ಧ ಲೈಂಗಿಕಕಿರುಕುಳ ಆರೋಪ ಮಾಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇದಾದ ನಂತರ ಆರೋಪ ಮಾಡಿದ ಮಹಿಳೆ ಮತ್ತು ಆಕೆಯ ಸಂಬಂಧಿಕರ ವಿರುದ್ಧ ಆಸ್ಪತ್ರೆಯ ವೈದ್ಯೆ ಡಾ. ಕೋಮಲ್ ದೂರು ನೀಡಿದ್ದಾರೆ ಎನ್ನಲಾಗಿದೆ.