ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 824 ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಖಾಲಿ ಇರುವ 1246 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು 88 ದಂತ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. 2832 ತಜ್ಞ ವೈದ್ಯರ ಹುದ್ದೆಗಳು ಮಂಜೂರಾಗಿದ್ದು 2008 ಜನ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರಸ್ತುತ 50 ವರ್ಷ ಮೇಲ್ಪಟ್ಟ ಕೆಲವು ಹಿರಿಯ ವೈದ್ಯರಿಗೆ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗಿದೆ. ಇದರಿಂದಾಗಿ ತಜ್ಞವೈದ್ಯರ ಸಮಸ್ಯೆ ಎದುರಾಗಿದ್ದು ಖಾಲಿ ಇರುವ ತಜ್ಞವೈದ್ಯರ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.