ಮೈಸೂರು: ಸಿಎಂ ಭರವಸೆ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ. ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವೈದ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ವೈದ್ಯರ ವಿರುದ್ಧ ಸಚಿವ ಡಾ.ಕೆ. ಸುಧಾಕರ್ ಅವರು ಹೇಳಿಕೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು, ಮೈಸೂರು ಜಿಪಂ ಸಿಇಒ ಅವರನ್ನು ಅಮಾನತು ಮಾಡಬೇಕು. ಅವರನ್ನು ವರ್ಗಾವಣೆ ಮಾಡಿದ್ದು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ನೋಡಲ್ ಅಧಿಕಾರಿಗಳು ಮಧ್ಯಪ್ರವೇಶ ಮಾಡಬಾರದು. ವೈದ್ಯಕೀಯ ವಿಚಾರಗಳ ಬಗ್ಗೆ ಅವರಿಗೆ ವಿಷಯ ತಿಳಿದಿಲ್ಲ. ಹೀಗಾಗಿ ನೋಡಲ್ ಅಧಿಕಾರಿಗಳು ಮಧ್ಯ ಬರಬಾರದು ಎಂದು ಒತ್ತಾಯಿಸಲಾಗಿದೆ.
ಜಿಪಂ ಸಿಇಒ ಅವರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಹೋರಾಟ ನಡೆಸಲಾಗುವುದು. ಮುಖ್ಯಮಂತ್ರಿಯವರು ಈ ಕುರಿತಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಸಿಎಂ ಬಿ.ಎಸ್.ವೈ. ಭರವಸೆ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಠಿಯಿಂದ ಪ್ರತಿಭಟನೆ ಕೈಬಿಡಲಾಗಿದ್ದು ಸಿಇಒ ವಿರುದ್ಧ ಕ್ರಮಕೈಗೊಳ್ಳುವವರೆಗೂ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.