ಬೆಂಗಳೂರಿನಲ್ಲಿ ಇದುವರೆಗೆ 160 ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ. ವಾಣಿವಿಲಾಸ ಆಸ್ಪತ್ರೆಯ ವೈದ್ಯರು 160 ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು ಇದುವರೆಗೆ ಯಾವ ಮಕ್ಕಳು ಸೋಂಕಿಗೆ ತುತ್ತಾಗಿಲ್ಲ ಎನ್ನಲಾಗಿದೆ.
ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್ ನಲ್ಲಿ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದ್ದು, ಹೆರಿಗೆಯಾಗುತ್ತಿದ್ದಂತೆ ವಾಣಿ ವಿಲಾಸ ಆಸ್ಪತ್ರೆಗೆ ವಿಶೇಷ ಆಂಬುಲೆನ್ಸ್ ನಲ್ಲಿ ಸ್ಥಳಾಂತರ ಮಾಡಲಾಗಿದೆ. ತಾಯಿಯಿಂದ ಮಗುವಿಗೆ ಕೊರೊನಾ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಲಾಗಿದ್ದು, ಮಕ್ಕಳನ್ನು ಆಸ್ಪತ್ರೆ ನರ್ಸ್ ಗಳು, ವೈದ್ಯರು ಆರೈಕೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.