alex Certify ಬೆಂಗಳೂರಲ್ಲಿ ನಡೆದಿದೆ ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ನಡೆದಿದೆ ಆಘಾತಕಾರಿ ಘಟನೆ

Female German Shepherd Facts - Amazing Things You Never Knew About Her

ಬೆಂಗಳೂರಿನ ಕಾಡುಗೋಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಜರ್ಮನ್ ಶೆಪರ್ಡ್ ನಾಯಿಗಳು ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಏಕಾಏಕಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿರುವ ಆಘಾತಕಾರಿ ಘಟನೆ ನಡೆದಿದೆ.

ನಿತಿನ್ ಎಂಬುವರ ಮಗಳು ಇನಯ ನಾಯಿಗಳ ದಾಳಿಯಿಂದ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಾಯಿಗಳ ಮಾಲೀಕರಾದ ಸುಜಯ್ ಮಿಶ್ರಾ ಮತ್ತು ಶುಭ್ರಾ ಅವರ ವಿರುದ್ಧ ಕಾಡುಗೋಡಿ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗುರುವಾರ ಸಂಜೆ 6.30 ರ ಸುಮಾರಿಗೆ ನಿತಿನ್ ಟ್ರೈ ಸೈಕಲ್ ನಲ್ಲಿ ಸೀಟ್ ಬೆಲ್ಟ್ ಹಾಕಿಕೊಂಡು ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಜರ್ಮನ್ ಶೆಪರ್ಡ್ ನಾಯಿಗಳೊಂದಿಗೆ ಸುಜಯ್ ಮಿಶ್ರಾ ಮತ್ತು ಶುಭ್ರಾ ಅವರು ನಿಂತಿದ್ದರು. ಈ ವೇಳೆ ಏಕಾಏಕಿ ಟ್ರೈಸಿಕಲ್ ನಲ್ಲಿದ್ದ ಮಗುವಿನ ಮೇಲೆ ದಾಳಿ ಮಾಡಿದ ನಾಯಿಗಳು ಕಚ್ಚಿ ಗಾಯಗೊಳಿಸಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...