ಬೆಂಗಳೂರು: ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ತಂದೆಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಟ್ವೀಟ್ ಮಾಡಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಸುಧಾಕರ್, ನನ್ನ ತಂದೆಯವರ ಕೋವಿಡ್ ಪರೀಕ್ಷೆ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರು ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಹೇಳಿದ್ದಾರೆ.